Mysore
18
few clouds

Social Media

ಶುಕ್ರವಾರ, 30 ಜನವರಿ 2026
Light
Dark

ಮಹಿಳಾ ಅಧಿಕಾರಿಗೆ ನಿಂದನೆ ಆರೋಪ: ಎಫ್‌ಐಆರ್‌ ದಾಖಲಿಸಿದ ಪೊಲೀಸರು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಹಳೇನಗರ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಅಧಿಕಾರಿಗೆ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಆರೇಳು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಎಂಬುವವರು ನೀಡಿದ ದೂರಿನ ಆಧಾರದ ಮೇರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹಳೇನಗರ ಠಾಣೆಯಲ್ಲಿ ಬಿಎನ್ಎಸ್ 132, 352, 351/2, 189/2,190 BNS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಇನ್ನೂ ಪ್ರಕರಣದಲ್ಲಿ ಈ ಜಿಲ್ಲೆಯ ಕಾಂಗ್ರೆಸ್‌ ಶಾಸಕ ಸಂಗಮೇಶ್ ಪುತ್ರ ಬಸವೇಶ್​ ವಿರುದ್ಧ ಆರೋಪ ಕೇಳಿ ಬಂದಿದೆ. ಆದರೆ ಎಫ್‌ಐಆರ್‌ನಲ್ಲಿ ಶಾಸಕರ ಪುತ್ರನ ಹೆಸರು ಉಲ್ಲೇಖಿಸದೆ ಆರೇಳು ಮಂದಿ ವಿರುದ್ದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಏನಿದು ಪ್ರಕರಣ?

ಬಿ.ಎಸ್‌.ಬಸವೇಶ್‌ಗೆ ಸಂಬಂಧಿಸಿದ ಅಕ್ರಮ ಮರಳುಗಾರಿಕೆಯನ್ನು ತಡೆಯಲು ಭೂ ವಿಜ್ಞಾನಿ​ ಜ್ಯೋತಿ ಬಂದಿದ್ದರು. ಆದರೆ ಈ ಸಂದರ್ಭದಲ್ಲಿ ಬಸವೇಶ್‌ ಆಪ್ತರೊಬ್ಬ ಅಧಿಕಾರಿ ಜ್ಯೋತಿ ಅವರಿಗೆ ಫೋನ್‌ ಕರೆ ಮಾಡಿ ಮಾತನಾಡಿ ಎಂದು ಮೊಬೈಲ್‌ ಫೋನ್‌ ನೀಡಿದ್ದರು. ಈ ವೇಳೆ ಸೇವೆಗೆ ಅಡ್ಡಿಪಡಿಸುವಂತೆ ನಿಂದಿಸಿದ್ದಾರೆ ಎಂಬ ಆರೋಪವಿತ್ತು. ಅಲ್ಲದೇ ಈ ಸಂಬಂಧ ಒಂದು ವಿಡಿಯೋ ವೈರಲ್‌ ಆಗಿತ್ತು.

Tags:
error: Content is protected !!