Mysore
23
few clouds

Social Media

ಸೋಮವಾರ, 26 ಜನವರಿ 2026
Light
Dark

ಉದಯಗಿರಿ ಗಲಾಟೆ ಪ್ರಕರಣ: ಪೊಲೀಸ್‌ ವಿಚಾರಣೆಯಲ್ಲಿ ಮಧ್ಯ ಪ್ರವೇಶಿಸಲ್ಲ ಎಂದ ತನ್ವೀರ್‌ ಸೇಠ್‌

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್‌ ಸೇಠ್‌ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್‌ ವಿಚಾರಣೆಯಲ್ಲಿ ನಾನು ಮಧ್ಯ ಪ್ರವೇಶಿಸಲ್ಲ. ಆದರೆ ಅಮಾಯಕರಿಗೆ ತೊಂದರೆ ಆಗಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್‌ ಸೇಠ್‌ ಅವರು, ಪೊಲೀಸ್‌ ಇಲಾಖೆ ಅಂದೇ ರಾತ್ರಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಸಾವಿನ ಮನೆಯಲ್ಲಿ ರಾಜಕೀಯ ಮಾಡಬಾರದು. ಈಗ ಉದಯಗಿರಿ ಸಹಜ ಸ್ಥಿತಿಗೆ ಬಂದಿದೆ. ಯಾರೇ ತಪ್ಪು ಮಾಡಿದ್ದರೂ ಕಾನೂನಿನಡಿ ಕ್ರಮ ಜರುಗಿಸಲಾಗುತ್ತದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪೊಲೀಸ್‌ ವಿಚಾರಣೆಯಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ. ಆದರೆ ಒಂದು ಮಾತು ಹೇಳುತ್ತೇನೆ. ಅಮಾಯಕರಿಗೆ ತೊಂದರೆ ಆಗಬಾರದು. ಈ ಘಟನೆಗೆ ಮೂಲ ಕಾರಣ ಯಾರು. ಆ ಪೋಸ್ಟ್‌ ಹಾಕಿದ್ದು ಯಾರು? ಸಿದ್ಧಪಡಿಸಿದ್ದು ಯಾರು? ಅಂತಹವರನ್ನು ಪತ್ತೆ ಹಚ್ಚಿ ಎಂದು ಹೇಳಿದ್ದೇನೆ ಎಂದರು.

ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕಾಗಿ ಗಲಾಟೆ ವಿಕೋಪಕ್ಕೆ ತಿರುಗಿದೆ. ಕಾನೂನು ಕೈಗೆ ತೆಗೆದುಕೊಂಡಿದ್ದು ತಪ್ಪಾಗಿದೆ. ತಪ್ಪು ಮಾಡಿರುವ ಆರೋಪಿಗಳ ವಿರುದ್ಧ ಕ್ರಮ ಆಗುತ್ತದೆ ಎಂದು ಹೇಳಿದರು.

Tags:
error: Content is protected !!