Mysore
23
overcast clouds

Social Media

ಮಂಗಳವಾರ, 19 ಮೇ 2026
Light
Dark

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಡಾಲಿ ಧನಂಜಯ್‌ ಹಾಗೂ ಧನ್ಯತಾ

ಮೈಸೂರು: ಶುಭ ಮೀನ ಲಗ್ನದಲ್ಲಿ ನಟ ಡಾಲಿ ಧನಂಜಯ್‌ ಅವರು, ಧನ್ಯತಾಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡಾಲಿ ಧನಂಜಯ್‌ ಹಾಗೂ ಡಾಕ್ಟರ್‌ ಧನ್ಯತಾ ಅವರ ಮದುವೆ ಅದ್ಧೂರಿಯಾಗಿ ನೆರವೇರಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಡಾಲಿ ಹಾಗೂ ಧನ್ಯತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೈಸೂರಿನ ಅರಮನೆ ಮುಂದಿನ ಎಕ್ಸಿಬಿಷನ್‌ ಗ್ರೌಂಡ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ನಟ ಡಾಲಿ ಧನಂಜಯ್‌ ಅವರು ಧನ್ಯತಾ ಕೊರಳಿಗೆ ತಾಳಿ ಕಟ್ಟಿದ್ದಾರೆ. ಈ ಜೋಡಿ ವಧು ವರರ ದಿರಿಸಿನಲ್ಲಿ ತುಂಬಾ ಮುದ್ದಾಗಿ ಕಾಣಿಸಿದ್ದಾರೆ.

ನಿನ್ನೆ ಡಾಲಿ ಧನಂಜಯ್‌ ಹಾಗೂ ಧನ್ಯತಾ ಅವರ ಮದುವೆ ಆರತಕ್ಷತೆ ಅದ್ಧೂರಿಯಾಗಿ ನಡೆದಿತ್ತು. ಇದರಲ್ಲಿ ಚಿತ್ರರಂಗದ ಗಣ್ಯರು, ಸೆಲೆಬ್ರಿಟಿಗಳು ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಿದ್ದರು. ಇಂದು ಡಾಲಿ ಹಾಗೂ ಧನ್ಯತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

 

Tags:
error: Content is protected !!