Mysore
27
scattered clouds

Social Media

ಭಾನುವಾರ, 25 ಜನವರಿ 2026
Light
Dark

ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯಾಗಿದೆ: ಸಂಸದ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕಾಗಿಯೇ ಎಲ್ಲಾ ದರಗಳನ್ನು ಏರಿಕೆ ಮಾಡಲಾಗುತ್ತಿದೆ. ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಮೆಟ್ರೋ ದರ ಏರಿಕೆ ವಿಚಾರದಲ್ಲಿ ಎಲ್ಲಾ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಸಿಎಂ ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದು ಅದಕ್ಕೆ ಸಾಕ್ಷಿ ಎಂದು ಹೇಳಿದರು.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲಾ ದರ ಏರಿಕೆ ಮಾಡುತ್ತಿದೆ. ವಿದ್ಯುತ್‌, ನೀರು, ಹಾಲಿನ ದರ ಸೇರಿದಂತೆ ಎಲ್ಲಾ ದರವನ್ನು ಏರಿಸಿದೆ. ಸರ್ಕಾರ ಹಣಕಾಸಿನ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.

ಇನ್ನು ಮೈಸೂರಿನ ಉದಯಗರಿ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡುವುದರ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವುದು ಗೊತ್ತಾಗುತ್ತದೆ. ಈ ಹಿಂದೆ ತನ್ವೀರ್‌ ಸೇಠ್‌ ಮೇಲೆ ಪಿಎಫ್‌ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ ಎಂದು ರಾಜ್ಯ ಸರ್ಕಾರದ ಆಡಳಿತದ ವಿರುದ್ಧ ಕಿಡಿಕಾರಿದರು.

 

 

Tags:
error: Content is protected !!