ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಮಾಡೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಮೆಟ್ರೋ ಸ್ವಾಯತ್ತ ಸಂಸ್ಥೆ ಆದರೂ, ಮೆಟ್ರೋವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಸೇರಿ ನಡೆಸುತ್ತವೆ. ಮೆಟ್ರೋ ದರ ನಿಗದಿ ಮಾಡುವ ಕಮಿಟಿ ನೇಮಕ ಮಾಡುವುದು ಕೇಂದ್ರ ಸರ್ಕಾರ. ಅದರಲ್ಲಿ ಇಬ್ಬರು ಕೇಂದ್ರ ಸರ್ಕಾರದ ಪ್ರತಿನಿಧಿ, ಒಬ್ಬರು ರಾಜ್ಯ ಸರ್ಕಾರದವರು ಇರುತ್ತಾರೆ ಎಂದು ತಿಳಿಸಿದರು.
ಬೆಲೆ ನಿಗದಿ ಮಾಡಿ ಎಂದು ಪ್ರಪೋಸಲ್ ಕೊಡುತ್ತೇವೆ. ಆದರೆ, ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದು ಹೇಳುವ ಮೂಲಕ ಕೇಂದ್ರದ ವಿರುದ್ಧ ಆರೋಪ ಮಾಡಿದರು.





