Mysore
27
overcast clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಕೊಟ್ಟ ಮಾತು ತಪ್ಪಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೊಟ್ಟ ಮಾತು ತಪ್ಪಲ್ಲ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂಬ ವಿಪಕ್ಷಗಳ ಟೀಕೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಿಲ್ಲ. ಆದರೆ, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ ಎಂದು ಆಶ್ವಾಸನೆ ನೀಡಿದರು.

ಇದಕ್ಕೂ ಮುನ್ನ ಆಹಾರ ಸಚಿವ ಮುನಿಯಪ್ಪ ಮಾತನಾಡಿ, ವಿಪಕ್ಷಗಳು ಟೀಕಿಸುವಂತೆ 4 ತಿಂಗಳ ಗ್ಯಾರಂಟಿ ಹಣ ಬಾಕಿ ಇಲ್ಲ. ಕೇವಲ ಎರಡು ತಿಂಗಳದು ಮಾತ್ರ ಬಾಕಿ ಇರುವುದು. ಎರಡು ತಿಂಗಳಿಗೊಮ್ಮೆ ಹಣ ಹಾಕುತ್ತಿದ್ದೆವು. ಇನ್ನು ಮುಂದೆ ಪ್ರತಿ ತಿಂಗಳು ಹಣ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದರು.

Tags:
error: Content is protected !!