Mysore
22
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಶೋಷಿತ, ದಲಿತ ಸಮುದಾಯಗಳ ಬೇಡಿಕೆ ನಿರಂತರವಾಗಿ ಈಡೇರಿಸುವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಮುಖ್ಯಮಂತ್ರಿ ಆದ ಬಳಿಕ ಶೋಷಿತ, ದಲಿತ ಸಮುದಾಯಗಳ ಬೇಡಿಕೆಗಳನ್ನು ನಿರಂತರವಾಗಿ ಈಡೇರಿಸುತ್ತಲೇ ಬಂದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನ ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಾವು. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ ಎಂದರು.

ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.

ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು. ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ಹೇಳಿದರು.

Tags:
error: Content is protected !!