Mysore
36
few clouds

Social Media

ಶನಿವಾರ, 25 ಏಪ್ರಿಲ 2026
Light
Dark

ಟಿ.ನರಸೀಪುರ| ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಸವಾರ ಸಾವು

ಮೈಸೂರು: ಜಿಲ್ಲೆಯ ಟಿ.ನರಸೀಪುರದ ಇಂಡವಾಳು ಗ್ರಾಮದ ಬಳಿ ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

21 ವರ್ಷದ ಯುವಕ ಪವನ್‌ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಟಿ.ನರಸೀಪುರ ತಾಲ್ಲೂಕಿನ ಕರೋಹಟ್ಟಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

ಪವನ್‌ ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಅಪಘಾತದ ರಭಸಕ್ಕೆ ಪವನ್‌ ಹೆಲ್ಮೆಟ್‌ ಕೂಡ ಪಕ್ಕಕ್ಕೆ ಬಿದ್ದಿದೆ. ಬೈಕ್‌ ಒಂದು ಕಡೆ ಹಾಗೂ ಯುವಕನ ಮೃತದೇಹ ಒಂದು ಕಡೆ ಬಿದ್ದಿದೆ.

ಈ ಸಂಬಂಧ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!