ನಾಗಮಂಗಲ: ಕೃಷಿಗೆ ಸಂಬಂಧಪಟ್ಟ ಸಮಗ್ರ ಮಾಹಿತಿ ನೀಡುವ ರೈತ ಕೇಂದ್ರದ ಸದುಪಯೋಗವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಚೆಲುವರಾಯಸ್ವಾಮಿ ಕರೆ ನೀಡಿದರು.
ನಾಗಮಂಗಲ ತಾಲೂಕು ಚಿನ್ಯ ಗ್ರಾಮದಲ್ಲಿ ನೂತನವಾಗಿ ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಹಲವು ವರ್ಷಗಳಿಂದಲೂ ಕೃಷಿ ಇಲಾಖೆಗೆ ನೂತನ ಕಟ್ಟಡಗಳು ಇಲ್ಲದ ಕಾರಣ ಜಿಲ್ಲೆ ಮತ್ತು ತಾಲೂಕು ಹೋಬಳಿ ಕೇಂದ್ರಗಳಲ್ಲಿ ರೈತ ಸಂಪರ್ಕ ಕಟ್ಟಡಗಳ ಅನುಷ್ಠಾನ ಮಾಡಲಾಗುತ್ತಿದೆ.
ಈಗಾಗಲೇ ಹಲವೆಡೆ ಕಾಮಗಾರಿಗಳು ನಡೆಯುತ್ತಿದ್ದು, ಕೃಷಿ ಕ್ಷೇತ್ರದಲ್ಲಿ ಹೊಸತನದ ಜೊತೆಗೆ ಸಮಗ್ರ ಕೃಷಿ ಮಾಹಿತಿ ನೀಡುವ ಉದ್ದೇಶವನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಅಶೋಕ್, ಕೃಷಿ ಇಲಾಖೆ ಅಧಿಕಾರಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.





