Mysore
22
broken clouds

Social Media

ಮಂಗಳವಾರ, 18 ಮಾರ್ಚ್ 2025
Light
Dark

ಸ್ನೇಹಮಯಿ ಕೃಷ್ಣ ವ್ಯರ್ಥ ಪ್ರಯತ್ನ ಮಾಡೋದನ್ನು ನಿಲ್ಲಿಸಬೇಕು: ಎಂ.ಲಕ್ಷ್ಮಣ್‌

ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರತಿಕ್ರಿಯೆ ನೀಡಿದ್ದು, ಇನ್ನಾದರೂ ಸ್ನೇಹಮಯಿ ಕೃಷ್ಣ ವ್ಯರ್ಥ ಪ್ರಯತ್ನ ಮಾಡುವುದನ್ನು ನಿಲ್ಲಿಸಲಿ ಎಂದು ಕಿಡಿಕಾರಿದ್ದಾರೆ.

ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್‌ ಸಲ್ಲಿಕೆ ಮಾಡಲು ಮುಂದಾಗಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಆರೋಪಿಗಳಿಗೆ ಕ್ಲಿನ್‌ಚಿಟ್‌ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಸತ್ಯಮೇವ ಜಯತೆ, ಸತ್ಯಕ್ಕೆ ಜಯ ಎಂದು ನಾಮಫಲಕ ಹಿಡಿದು ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದರು.

ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, ಸಿದ್ದರಾಮಯ್ಯನವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದರು. ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಬಿ ರಿಪೋರ್ಟ್‌ ಕೊಟ್ಟಿದೆ. ಸೂಕ್ತ ದಾಖಲೆ, ಸಾಕ್ಷ್ಯಾಧಾರಗಳಿಲ್ಲದೇ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕ್ಲೀನ್‌ಚಿಟ್‌ ಕೊಡುತ್ತಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ ಎಂದು ಲೋಕಾಯುಕ್ತ ವರದಿ ಹೇಳುತ್ತಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈ ಪ್ರಕರಣ ಕ್ರಿಮಿನಲ್‌ ಪ್ರಕರಣ ಅಲ್ಲವೇ ಅಲ್ಲ. ಇದೊಂದು ಸಿವಿಲ್‌ ಪ್ರಕರಣ. ಸೂಕ್ತ ಸಾಕ್ಷ್ಯಾಧಾರಗಳನ್ನು ನೀವು ಕೊಟ್ಟಿಲ್ಲ ಎಂದು ಲೋಕಾಯುಕ್ತ ಪೊಲೀಸರು ಈಗ ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್‌ ಕೊಟ್ಟಿದ್ದಾರೆ. ಇದು ಬಿಜೆಪಿ ಹಾಗೂ ಜೆಡಿಎಸ್‌ ಷಡ್ಯಂತ್ರ. ಅವರು ಏನೇ ಷಡ್ಯಂತ್ರ ಮಾಡಿದರೂ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ. ಈ ಹಿನ್ನೆಲೆಯಲ್ಲಿ ಇನ್ನಾದರೂ ಸ್ನೇಹಮಯಿ ಕೃಷ್ಣ ವ್ಯರ್ಥ ಪ್ರಯತ್ನ ಮಾಡುವುದನ್ನು ನಿಲ್ಲಿಸಬೇಕು ಎಂದು ಟಾಂಗ್‌ ಕೊಟ್ಟರು.

Tags: