Mysore
24
overcast clouds

Social Media

ಮಂಗಳವಾರ, 05 ಮೇ 2026
Light
Dark

ಓದುಗರ ಪತ್ರ | ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿ

ತಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಮಲಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ.

ಈ ಗ್ರಾಮಗಳ ರಸ್ತೆ, ಚರಂಡಿ, ಕೆರೆ, ಕಾಲುವೆಗಳಲ್ಲಿ ಕಸದ ರಾಶಿಯೇ ಹರಡಿದ್ದರೂ ಗ್ರಾಮ ಪಂಚಾಯಿ ಯವರು ಸ್ವಚ್ಛಗೊಳಿಸುವ ಗೋಜಿಗೆ ಹೋಗಿಲ್ಲ. ಇದರಿಂದಾಗಿ ಇಲ್ಲಿ ಚರಂಡಿಗೆ ಪ್ಲಾಸ್ಟಿಕ್ ಕವರ್‌ಗಳು, ಚೀಲ, ಬಾಟಲಿಗಳು ಕಟ್ಟಿಕೊಳ್ಳುತ್ತಿದ್ದು, ನೀರು ನಿಂತು ದುರ್ವಾಸನೆ ಬೀರಲಾರಂಭಿಸಿದೆ. ಇದರಿಂದಾಗಿ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಇನ್ನು ಎಲ್ಲ ರಸ್ತೆಗಳ ಎರಡೂ ಅಂಚುಗಳಲ್ಲಿ ಗಿಡಗಂಟಿ ಬೆಳೆದುಕೊಂಡಿದ್ದು, ವಾಹನ ಸವಾರರಿಗೆ ಎದುರುಗಡೆಯಿಂದ ಬರುವ ವಾಹನಗಳು ಕಾಣದ ಅಪಘಾತಗಳಾಗುವ ಅಪಾಯವಿದೆ. ಈ ಸಂಬಂಧ ಸಾಕಷ್ಟು ಬಾರಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಗ್ರಾಮಗಳ ಸ್ವಚ್ಛತೆಗೆ ಕ್ರಮಕೈಗೊಳ್ಳಬೇಕಿದೆ. -ಎನ್. ವಿನೋದ್, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ಮಾನಸಗಂಗೋತ್ರಿ, ಮೈಸೂರು.

Tags:
error: Content is protected !!