ಶಿವಮೊಗ್ಗ: ರಾಜ್ಯ ಸರ್ಕಾರ ಶಿಕ್ಷಕರ ನೇಮಕಾತಿಗೆ ಈಗಾಗಲೇ ಸಿದ್ಧತೆ ನಡೆಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಶಿಕ್ಷಕರ ನೇಮಕಕ್ಕೆ ನಮ್ಮ ಸರ್ಕಾರ ಈಗಾಗಲೇ ಸಿದ್ಧತೆ ನಡೆಸಿದೆ. ಕೆಲವು ತಾಂತ್ರಿಕ ಸಮಸ್ಯೆಯಿಂದ ಅತಿಥಿ ಶಿಕ್ಷಕರ ವೇತನ ನಿಲ್ಲಿಸಲಾಗಿದ್ದ ವೇತನವನ್ನು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬಿಡುಗಡೆ ಮಾಡಲಾಯಿತು ಎಂದರು.
ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವವರಿಗೆ ಅನುಮತಿ ನೀಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ಸದ್ಯ ಹಿಜಾಬ್ ಪ್ರಕರಣ ಕೋರ್ಟ್‌ನಲ್ಲಿದೆ. ಹೀಗಾಗಿ ಹಿಜಾಬ್ ಬಗ್ಗೆ ಯಾವುದೇ ಚರ್ಚಿಸುವುದು ಬೇಡ. ಆದರೆ ಮೊದಲಿನಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ ಎಂದು ಹೇಳಿದರು.




