Mysore
23
broken clouds

Social Media

ಸೋಮವಾರ, 26 ಜನವರಿ 2026
Light
Dark

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಚೆಲುವರಾಯಸ್ವಾಮಿ

ಮದ್ದೂರು: ಬಡವರ ಹೇಳಿಗೆಗಾಗಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ವಿರೋಧ ಪಕ್ಷದವರ ಮಾತಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಎನ್‌.ಚೆಲುವರಾಯಸ್ವಾಮಿ ಹೇಳಿದರು.

ಇಂದು (ಫೆ.23) ಕೊಪ್ಪ ಕೆರೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪ ಹೋಬಳಿಯ ಸಮಗ್ರ ಅಭಿವೃದ್ದಿಗೆ ಶ್ರಮಿಸಲಾಗುವುದದು. ಕೊಪ್ಪದಲ್ಲಿ ನಾಡ ಕಚೇರಿ ನಿರ್ಮಾಣ, ಪೊಲೀಸ್‌ ಠಾಣೆಗೆ ಹೊಸ ಕಟ್ಟಡ ನಿರ್ಮಾಣ, ಪ್ರಾಥಾಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಅಭಿವೃದ್ದಿ ಕಾಮಗಾರಿಗಳನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಕೊಪ್ಪ ಕೆರೆಯ ನಾಲೆಗಳ ನಿರ್ಮಾಣಕ್ಕೆ ನೀರಾವರಿ ಇಲಾಖೆಗೆ ಸುಮಾರು 100 ಕೋಟಿ ರೂ. ಹಣ ಬಿಡುಗಡೆಗೊಳಿಸಲಾಗುವುದು. ಎನ್‌.ಎಸ್‌.ಎಲ್‌. ಸಕ್ಕರೆ ಕಾರ್ಖಾನೆಯಿಂದ ಕೊಪ್ಪದವರೆಗೆ ಜೋಡಿ ರಸ್ತೆ ನಿರ್ಮಾಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದರು.

ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳಿಗೆ 2 ತಿಂಗಳಿಂದ ಹಣ ನೀಡಿರದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಗೃಹಲಕ್ಷ್ಮೀ ಯೋಜನೆಯಡಿ ಆದಷ್ಟು ಬೇಗ ಹಣ ಖಾತೆಗಳಿಗೆ ಜಮೆಯಾಗಲಿದೆ ಎಂದರು.

ವಿಶ್ವವಿದ್ಯಾಲಯಗಳ ವಿಲೀನ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳನ್ನು ವಿಲೀನ ಮಾಡುವಂತೆ ಯಾರು ಹೇಳಿಲ್ಲ. ಆದರೆ, ಶಿಕ್ಷಣ ತಜ್ಞರು ವಿಲೀನ ಮಾಡಿದರೆ ಒಳ್ಳೆಯದು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಮಾಡಲಿದೆ ಎಂದರು.

ನಾಗಮಂಗಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್‌. ದಿವಾಕರ್‌, ತಾ.ಪಂ.ಉಪಾಧ್ಯಕ್ಷರಾದ ಬೆಕ್ಕಳಲೆ ರಘು, ರಾಮಚಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.

 

Tags:
error: Content is protected !!