Mysore
25
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸುವ ಲಕ್ಷಣ ಕಾಣುತ್ತಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸುವ ಲಕ್ಷಣ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಬಿಲ್‌ ವಸೂಲಿಗೆ ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಈ ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡಬೇಕಿದೆ. ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಆಲ್‌ ಇಸ್‌ ವೆಲ್‌ ಎಂಬ ಭಾವನೆಯಿಂದ ಸಿಎಂ ಸಿದ್ದರಾಮಯ್ಯ ಹೊರಬರಬೇಕು ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಾರಿಗೆ ಸಂಸ್ಥೆಗೆ ಸರ್ಕಾರದಿಂದ 7 ಸಾವಿರ ಕೋಟಿ ರೂ ಕೊಡಬೇಕು. ಅದನ್ನು ಕೊಡಲು ಸರ್ಕಾರ ಪರದಾಟ ನಡೆಸುತ್ತಿದೆ. ನೌಕರರಿಗೆ ಸಂಬಳ ಕೊಡಲು ಕೂಡ ಸರ್ಕಾರದ ಬಳಿ ಹಣವಿಲ್ಲ. ಹಾಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸುವ ಲಕ್ಷಣ ಕಾಣುತ್ತಿದೆ. ಎಲ್ಲಾ ಇಲಾಖೆಗಳು ಬಾಗಿಲು ಮುಚ್ಚುವ ಸ್ಥಿತಿ ಬಂದೊದಗಿದೆ. ಈ ಎಲ್ಲಾ ಸಮಸ್ಯೆಗಳನ್ನು ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

 

Tags:
error: Content is protected !!