Mysore
20
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಮೈಸೂರು | ಕೆ.ಆರ್‌ ಆಸ್ಪತ್ರೆಗೆ ಡಿಸಿ ದಿಢೀರ್‌ ಭೇಟಿ; ಪರಿಶೀಲನೆ

ಮೈಸೂರು: ಇಲ್ಲಿನ ಕೆ.ಆರ್‌ ಆಸ್ಪತ್ರೆಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಕ್ಕೇಶ್ ಕುಮಾರ್.ಎಸ್ ಅವರು ಇಂದು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು–ಕೊರತೆಗಳ ಬಗ್ಗೆ ಪರಿಶೀಲಿಸಿದ ಅವರು, ಆಸ್ಪತ್ರೆಯ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ನಂತರ ವಾರ್ಡ್‌ಗಳಿಗೆ ತೆರಳಿ ಅಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲನೆ ನಡೆಸಿದರು.

Tags:
error: Content is protected !!