Mysore
18
few clouds

Social Media

ಮಂಗಳವಾರ, 27 ಜನವರಿ 2026
Light
Dark

ಕೌಶಲ್ಯಾಭಿವೃದ್ದಿ ಕೇಂದ್ರ ಸ್ಥಾಪನೆ: ಕೇಂದ್ರ ಸಚಿವರಿಗೆ ಮನವಿ ಮಾಡಿದ ಕೆ.ಹೆಚ್‌.ಮುನಿಯಪ್ಪ

ನವದೆಹಲಿ: ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಬೆಂಗಳೂರಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ ಬಹು ಕೌಶಲ್ಯ ಅಭಿವೃದ್ದಿ ಕೇಂದ್ರ ಮಂಜೂರು ಮಾಡುವಂತೆ ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಮುನಿಯಪ್ಪ ಅವರು ಬೇಡಿಕೆ ಸಲ್ಲಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಉದ್ಯಮ ಪೋರ್ಟಲ್‌ನಲ್ಲಿ 45,000 MSME ಘಟಕಗಳು ನೋದಣಿಯಾಗಿದ್ದು, ಅಂದಾಜು ನಾಲ್ಕು ಲಕ್ಷ ಜನರಿಗೆ ಉದ್ಯೋಗವಕಾಶಗಳನ್ನು ಒದಗಿಸುತ್ತಿವೆ ಎಂದು ಕೇಂದ್ರ ಸಚಿವರ ಗಮನಕ್ಕೆ ತಂದರು.

ಬೇಡಿಕೆ ಆಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳ ಮೂಲಕ ನಾವು ಉದ್ಯಮದ ಅವಶ್ಯಕತೆಗಳು ಮತ್ತು ಲಭ್ಯವಿರುವ ಮಾನವ ಸಂಪನ್ಮೂಲಗಳ ನಡುವಿನ ಅಂತರ ಕಡಿಮೆ ಮಾಡಬಹುದಾಗಿದೆ ಎಂದು ಚರ್ಚಿಸಿದ್ದಾರೆ.

ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲೂಕಿಗೆ ಬಹು ಕೌಶಲ್ಯ ಅಭಿವೃದ್ದಿ ಕೇಂದ್ರವನ್ನು ಶೀಘ್ರವಾಗಿ ಮಂಜೂರು ಮಾಡುವಂತೆ ವಿನಂತಿಸಿದರು.

 

Tags:
error: Content is protected !!