ಮೋಹನ್ ಕುಮಾರ್ ಬಿ.ಟಿ
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಇಂದು ಆರೋಪಿಯೋರ್ವನ ಕಾಲಿಗೆ ಫೈರಿಂಗ್ ಮಾಡಿದ್ದಾರೆ.
ಮಂಡ್ಯ ತಾಲೂಕಿನ ಬಿ.ಹೊಸೂರು ಬಳಿ ಈ ಘಟನೆ ನಡೆದಿದ್ದು, ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಸುಭಾಸ್ ಅಲಿಯಾಸ್ ಸುಬ್ಬು ಎಂಬಾತನ ಮೇಲೆ ಪೂರ್ವ ಠಾಣೆ ಪಿಎಸ್ಐ ಶೇಷಾದ್ರಿ ಕುಮಾರ್ ಎಂಬುವವರು ಫೈರಿಂಗ್ ಮಾಡಿದ್ದಾರೆ.
ಐದಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಸುಭಾಷ್ ಕಳೆದ ಕೆಲ ದಿನಗಳಿಂದ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಆರೋಪಿ ಸುಭಾಷ್ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.





