Mysore
33
few clouds

Social Media

ಬುಧವಾರ, 22 ಏಪ್ರಿಲ 2026
Light
Dark

ಮಾ.22ರಂದು ಕರ್ನಾಟಕ ಬಂದ್‌ಗೆ ಕರೆ

ಬೆಂಗಳೂರು: ಭಾಷಾ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಮೇಲಿನ ಹಲ್ಲೆ ಖಂಡಿಸಿ ಮಾರ್ಚ್‌ 22ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌, ಮಾ.22ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್‌ ಮಾಡಲು ನಿರ್ಧರಿಸಲಾಗಿದೆ. ಮಾ.3ರಂದು ಕನ್ನಡ ಒಕ್ಕೂಟದಿಂದ ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.

ಮಾ.7ರಂದು ಬೆಳಗಾವಿ ಚಲೋ, ಮಾ.11ರಂದು ಅತ್ತಿಬೆಲೆ ಅಂಗಡಿ ಬಂದ್‌, ಮಾ.16ರಂದು ಹೊಸಕೋಟೆ ಟೋಲ್‌ ಬಂದ್‌ ಮಾಡಲಾಗುತ್ತದೆ ಎಂದರು.

ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದ್ದು, ಈ ಎಲ್ಲವನ್ನು ಖಂಡಿಸಲು ಮಾ.22ರಂದು ಅಖಂಡ ಕರ್ನಾಟಕ ಬಂದ್‌ ಮಾಡಲು ಕನ್ನಡ ಪರ ಸಂಘಟನೆಗಳು ತೀರ್ಮಾನಿಸಿವೆ ಎಂದು ತಿಳಿಸಿದರು.

Tags:
error: Content is protected !!