Mysore
29
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

PUC EXAM | ನಾಳೆಯಿಂದ ಪಿಯುಸಿ ಪರೀಕ್ಷೆ-1 ಆರಂಭ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ನಾಳೆಯಿಂದ(ಮಾರ್ಚ್‌ 1)  ರಾಜ್ಯಾದ್ಯಂತ ಪ್ರಾರಂಭವಾಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಶಿಕ್ಷಣ ಇಲಾಖೆ ಹಿಂದೆಂದಿಗಿಂತಲೂ ಈ ಬಾರಿ ಬಿಗಿ ಕ್ರಮಗಳನ್ನು ತೆಗೆದುಕೊಂಡಿದೆ.

ಪರೀಕ್ಷೆ 1 ಇಂದಿನಿಂದ ಪ್ರಾರಂಭವಾಗಿ ಮಾ.20ರವರೆಗೆ ನಡೆಯಲಿದೆ. ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿರುವ ಶಿಕ್ಷಣ ಇಲಾಖೆ ಇದೇ ಮೊದಲ ಬಾರಿಗೆ ವೆಬ್‌ಕಾಸ್ಟಿಂಗ್ ಕಣ್ಗಾವಲು ವ್ಯವಸ್ಥೆ ಮಾಡಿದೆ. ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವೆಬ್‌ಕ್ಯಾಸ್ಟಿಂಗ್ ವ್ಯವಸ್ಥೆ ಜಾರಿ ಮಾಡಲಾಗಿತ್ತು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೂ ವ್ಯವಸ್ಥೆ ಮಾಡುವ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದೆ. ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.

ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 3,35,468ಗಂಡು ಮಕ್ಕಳು,3,78,389  ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳಿದ್ದಾರೆ. ಒಟ್ಟು 1,171ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

Tags:
error: Content is protected !!