Mysore
33
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಅನುದಾನ ನೀಡಿರುವುದು ಸುಳ್ಳು: ರಾಮಲಿಂಗಾ

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಬೆಂಗಳೂರಿಗೆ ಏನು ಕೊಡುಗೆ ನೀಡಿಲ್ಲ. ಅವರು ಅನುದಾನ ನೀಡಿರುವುದು ಶುದ್ಧ ಸುಳ್ಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಇಂದು (ಮಾ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ 1,600 ಕೋಟಿ ರೂ. ಮಾತ್ರ ನೀಡಲಾಗಿತ್ತು. ಆದರೆ, ನಿಜೆಪಿ ಶಾಸಕರಿದ್ದ ಕ್ಷೇತ್ರಗಳಿಗೆ 5 ಸಾವಿರ ಕೋಟಿ ರೂ. ಅನುದಾನ ಹಂಚಿಕೆಯಾಗಿತ್ತು ಎಂದರು.

ಬಿಜೆಪಿ ಶಾಸಕರಾದ ಎಸ್‌.ಟಿ.ಸೋಮಶೇಖರ್‌, ಮುನಿರತ್ನ ಹಾಗೂ ಭೈರತಿ ಬಸವರಾಜು ಅವರ ಕ್ಷೇತ್ರಗಳಿಗೆ ಹಿಂದಿನ ಬಿಜೆಪಿ ಸರ್ಕಾರ ಅತಿ ಹೆಚ್ಚು ಅನುದಾನ ನೀಡಿತ್ತು ಎಂದು ಅಂಕಿ ಅಂಶಗಳನ್ನು ನೀಡಿದರು.

ಬಿಬಿಎಂಪಿ ಚುನಾವಣೆ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ. ಗ್ರೇಟರ್‌ ಬೆಂಗಳೂರು ಮಸೂದೆ ವಿಧಾನಮಂಡಲದಲ್ಲಿ ಅನುಮೋದನೆ ಆಗಲಿದೆ. ಅದರ ಪ್ರಕಾರ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದರು.

 

Tags:
error: Content is protected !!