Mysore
18
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಉಕ್ಕಿನ ಕಾರ್ಖಾನೆ ನಿರ್ಮಾಣ ಪ್ರಸ್ತಾವ ಕೇಂದ್ರದ ಮುಂದಿಲ್ಲ ; ಎಚ್‌ಡಿಕೆ

ಕೊಪ್ಪಳ: ಕೊಪ್ಪಳದಲ್ಲಿ ಬಲ್ಡೋಟಾ ಕಂಪನಿಯು ಉಕ್ಕಿನ ಕಾರ್ಖಾನೆ ಸ್ಥಾಪಿಸುವ ಸಂಬಂಧ ಕೇಂದ್ರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಲ್ಲಿ ಕೇಂದ್ರದ ಹಸ್ತಕ್ಷೇಪವೆನಿಲ್ಲ. ಕಾರ್ಖಾನೆ ಹಾಗೂ ರಾಜ್ಯ ಸರ್ಕಾರ ನಡುವೆ ಒಪ್ಪಂದವಾಗಿದೆ ಎಂದು ತಿಳಿಸಿದರು.

ಕಾರ್ಖಾನೆ ನಿರ್ಮಾಣ ವಿರೋಧಿಸಿ ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಹೋರಾಟ ಗಮನಿಸಿದ್ದೇನೆ. ಹೋರಾಟಕ್ಕೆ ನನ್ನ ಬೆಂಬಲವೂ ಇದೆ. ಇಲ್ಲಿ ಕಾರ್ಖಾನೆ ನಿರ್ಮಿಸಿದರೆ ಪರಿಸರಕ್ಕೆ ಹಾನಿಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಹೇಳಿದರು.

೩೦ ರಿಂದ ೩೫ ಸಾವಿರ ಎಕರೆ ಪ್ರದೇಶದಲ್ಲಿ ಉಕ್ಕಿನ ಕಾರ್ಖಾನೆ ಮಾಡಿದ್ದಾರೆ. ಅಲ್ಲಿ ಟೌನ್‌ ಶಿಪ್‌ ನಿರ್ಮಾಣ ಮಾಡಿದ್ದಾರೆ.

ಯಾವುದೇ ಸರ್ಕಾರಗಳು ಕಾರ್ಖಾನೆ ನಿರ್ಮಿಸುವಾಗ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಆರಂಭಿಸಬೇಕು. ಕೈಗಾರಿಕಾ ಸ್ಥಾಪನೆಗೆ ಕೇಂದ್ರದ ನೀತಿಯಿದ್ದು, ಅದು ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು ಎಂದು ಎಂದು ಹೇಳಿದರು.

Tags:
error: Content is protected !!