Mysore
22
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

ದಕ್ಷಿಣ ರಾಜ್ಯಗಳ ಬಲ ಕಡಿಮೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ: ಡಿಕೆಶಿ

ಉಡುಪಿ: ಸಂಸತ್‌ನಲ್ಲಿ ದಕ್ಷಿಣ ರಾಜ್ಯಗಳ ಬಲ ಕಡಿಮೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಇದರ ವಿರುದ್ಧ ಕಾಂಗ್ರೆಸ್‌ ಹೋರಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಕಾಪುಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ದಿ ಸಮಿತಿ ಆಯೋಜಿಸಿರುವ ಅಮ್ಮನ ಪ್ರತಿಷ್ಠಾಪನ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ವೇಳೆ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು.

ಸಂಸತ್‌ನಲ್ಲಿ ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಕ್ಷೇತ್ರಗಳ ಪುನರ್‌ವಿಂಗಡಣೆ ಎಂಬ ವಿಷಯವನ್ನು ಮುನ್ನಲೆಗೆ ತರುತ್ತಿದೆ. ಇದಕ್ಕೆ ಕಾಂಗ್ರೆಸ್‌ ಪಕ್ಷದಿಂದ ತೀವ್ರ ವಿರೋಧವಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಚಿನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು. ಆಗ್ಯವಿದ್ದರೆ ನ್ಯಾಯಾಲಯದ ಮೂಲಕವು ಹೋರಾಟ ಮಾಡಲಾಗುವುದು ಎಂದರು.

 

Tags:
error: Content is protected !!