Mysore
26
overcast clouds

Social Media

ಗುರುವಾರ, 07 ಮೇ 2026
Light
Dark

ರಾಜ್ಯ ಸರ್ಕಾರ ಕಮಿಷನ್‌ ದಂಧೆಯಲ್ಲಿ ಮುಳುಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ, ನಿಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕಮಿಷನ್ ದಾಹ ಮಿತಿಮೀರಿದೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ. ಜಿಎಸ್ಟಿ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದು ಅನಿವಾರ್ಯ ಎಂದು ಗುತ್ತಿಗೆದಾರರು ಅಳಲು ತೋಡಿಕೊಂಡಿದ್ದಾರೆ. ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಎಂದು ಪ್ರಶ್ನೆ ಮಾಡಿದರು.

ಇನ್ನು ಸುಳ್ಳು, ಅಪ ಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರಂಟಿ ಎಂದು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್‌ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

 

Tags:
error: Content is protected !!