Mysore
24
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಕೇಂದ್ರ ಸಚಿವರ ಮಗಳಿಗೆ ಕಿರುಕುಳ ಪ್ರಕರಣ: ಓರ್ವ ಆರೋಪಿ ಬಂಧನ

ಮುಂಬೈ: ಜಾತ್ರೆಯೊಂದರಲ್ಲಿ ಕೇಂದ್ರ ಸಚಿವರೊಬ್ಬರ ಮಗಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಜಲ್ಲಾಂವ್‌ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳು ಕಿರುಕುಳಕ್ಕೊಳಗಾದ ನಂತರ ಯೂನಿಯನ್‌ ಕ್ಯಾಬಿನೆಟ್‌ನ ಮಂತ್ರಿಯೊಬ್ಬರು ಮಹಾರಾಷ್ಟ್ರದಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು.

ಬಿಜೆಪಿ ನಾಯಕಿ ರಾಕ್ಷಾ ಖಡ್ಸೆ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಹಾಗೂ ಬೆಂಬಲಿಗರ ಜೊತೆ ತೆರಳಿ ಠಾಣೆಗೆ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Tags:
error: Content is protected !!