Mysore
24
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

ರಾಮಮಂದಿರದ ಮೇಲೆ ಗ್ರೆನೇಡ್‌ ದಾಳಿಗೆ ಯತ್ನ?: ಶಂಕಿತ ಉಗ್ರ ಅಬ್ದುಲ್‌ ರೆಹಮಾನ್‌ ಬಂಧನ

ಅಹಮದಾಬಾದ್:‌ ಅಯೋಧ್ಯೆಯ ರಾಮಮಂದಿರದ ಮೇಲೆ ಗ್ರೆನೇಡ್‌ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂಬ ಆರೋಪದಡಿ ಅಬ್ದುಲ್‌ ರೆಹಮಾನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಗುಜರಾತ್‌ನ ಎಟಿಎಸ್‌ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಅಬ್ದುಲ್‌ ರೆಹಮಾನ್‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ದಾಳಿ ವೇಳೆ ಪಾಳುಬಿದ್ದ ಮನೆಯೊಂದರಲ್ಲಿ ಎರಡು ಜೀವಂತ ಹ್ಯಾಂಡ್‌ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಬ್ದುಲ್‌ ರೆಹಮಾನ್‌ನ ಭಯೋತ್ಪಾದಕ ಸಂಪರ್ಕಗಳ ಕುರಿತು ತನಿಖೆ ಮುಂದುವರಿದಿದೆ. ಮೂಲಗಳ ಪ್ರಕಾರ, ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.

 

Tags:
error: Content is protected !!