Mysore
21
broken clouds

Social Media

ಬುಧವಾರ, 14 ಜನವರಿ 2026
Light
Dark

ಹಕ್ಕಿ ಜ್ವರದ ಬಗ್ಗೆ ಆತಂಕ ಬೇಡ, ಎಚ್ಚರ ವಹಿಸಿ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಜನತೆ ಹಕ್ಕಿಜ್ವರದ ಬಗ್ಗೆ ಆತಂಕ ಪಡುವುದು ಬೇಡ, ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದಂತೆ ಎಚ್ಚರ ವಹಿಸಿ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ.ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ.‌ ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

Tags:
error: Content is protected !!