Mysore
24
haze

Social Media

ಶುಕ್ರವಾರ, 02 ಜನವರಿ 2026
Light
Dark

ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ ಎಂದ ಸಚಿವ ವೆಂಕಟೇಶ್‌

ಬೆಂಗಳೂರು: ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಸಚಿವ ವೆಂಕಟೇಶ್‌ ಹೇಳಿದ್ದಾರೆ.

ಈ ಬಗ್ಗೆ ವಿಧಾನ ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಹಾಲು ಉತ್ಪಾದಕರಿಗೆ 656.07 ಕೋಟಿ ರೂ ಪ್ರೋತ್ಸಾಹಧನ ಬಾಕಿ ಉಳಿದುಕೊಂಡಿದೆ. 9,04,547 ಫಲಾನುಭವಿಗಳಿಗೆ ಬಾಕಿ ಹಣ ಕೊಡಬೇಕಾಗಿದೆ. ಇದರಲ್ಲಿ ಸಾಮಾನ್ಯ ವರ್ಗಕ್ಕೆ 613.58 ಕೋಟಿ ರೂ ಹಾಗೂ ಪರಿಶಿಷ್ಟ ಜಾತಿಯವರಿಗೆ 18.29 ಕೋಟಿ ರೂ ಹಾಗೂ ಪರಿಶಿಷ್ಟ ಪಂಗಡಕ್ಕೆ 24.20 ಕೋಟಿ ರೂ ಬಾಕಿಯಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಹಾಲಿನ ಉತ್ಪಾದನೆ ಜಾಸ್ತಿ ಆಗಿದೆ. ಸಿಎಂ ಅವರಿಗೆ ಬಾಕಿ ಹಣ ಬಿಡುಗಡೆಗೆ ಮನವಿ ಮಾಡಿದ್ದೇವೆ. ಆದಷ್ಟು ಬೇಗ ಬಾಕಿ ಹಣ ಬಿಡುಗಡೆ ಮಾಡುತ್ತೇವೆ. ಇನ್ನೂ ಹಾಲಿನ ದರ ಏರಿಕೆಗೆ ರೈತರ ಬೇಡಿಕೆಯಿದ್ದು, 10 ರೂ ಜಾಸ್ತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಹಾಲಿನ ದರ ಏರಿಕೆ ಮಾಡೇ ಮಾಡುತ್ತೇವೆ. ಎಷ್ಟು ಎಂದು ಸಿಎಂ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

 

 

Tags:
error: Content is protected !!