ಬೆಂಗಳೂರು: ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್‌ಗೆ ಏಕರೂಪ ದರ ನಿಗದಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, ಚಿತ್ರಮಂದಿರದ ಮಾಲೀಕರೇ ಟಿಕೆಟ್ ದರ ನಿಗದಿ ಮಾಡುವ ಪರಿಸ್ಥಿತಿಯಿದೆ. ಬೇಕಾಬಿಟ್ಟಿಯಾಗಿ ಟಿಕೆಟ್ ದರ ಫಿಕ್ಸ್ ಮಾಡಲಾಗುತ್ತಿದೆ. ಮಲ್ಟಿಫ್ಲೆಕ್ಸ್‌ಗಳು ಬೇಕಾಬಿಟ್ಟಿ ವಸೂಲಿ ಮಾಡುತ್ತಿದೆ.
ಹಾಗೆಯೇ ಚಿತ್ರಮಂದಿರಗಳಲ್ಲಿ ವಾಟರ್ ಬಾಟಲ್ ಸೇರಿದಂತೆ ಎಲ್ಲವನ್ನೂ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಸಿನಿಮಾದ ಟಿಕೆಟ್ ದರಕ್ಕಿಂತ ಗ್ರಾಹಕರಿಗೆ ನೀರಿನ ಬಾಟಲ್, ತಿನಿಸುಗಳ ದರವೇ ಹೆಚ್ಚಾಗಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಿನಿಮಾ ಟಿಕೆಟ್‌ಗೆ ಏಕರೂಪ ದರ ನಿಗದಿ ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಮಾಹಿತಿ ನೀಡಿದರು.





