Mysore
35
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಸಮರ್ಥ ಮತ್ತು ಸಾರ್ಥಕ ಬಜೆಟ್: ಎಂ.ಕೆ.ಸೋಮಶೇಖರ್‌

ಮೈಸೂರು: ರಾಜ್ಯದ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಜೊತೆಗೆ ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗುವ ಸಮರ್ಥ ಮತ್ತು ಸಾರ್ಥಕ ಬಜೆಟ್‌ ಎಂದು ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ಹೇಳಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ 16 ನೇ ಐತಿಹಾಸಿಕ ದಾಖಲೆಯ ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಬಜೆಟ್‌ ರಾಜ್ಯದ ಸಮಗ್ರ ಆರ್ಥಿಕ ಅಭಿವೃದ್ದಿಗೆ ಮುನ್ನುಡಿ ಬರೆದಂತಿದೆ. ಜೊತೆಗೆ ಜನರ ಜೀವನ ಗುಣಮಟ್ಟ ಸುಧಾರಿಸುವ ಬಜೆಟ್‌ ಇದಾಗಿದೆ ಎಂದು ಹೇಳಿದರು.

ಮನುಷ್ಯನಿಗೆ ಮೂಲಭೂತವಾಗಿ ಅಗತ್ಯವಿರುವ ಆರೋಗ್ಯ, ಶಿಕ್ಷಣ, ರಕ್ಷಣೆಗೆ ಒತ್ತು ನೀಡಿದ್ದು ಮಹಿಳೆಯರು, ಕಾರ್ಮಿಕರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ರೈತಾಪಿ ವರ್ಗದ ಸ್ನೇಹಿಯಾಗಿದೆ ಎಂದರು.

Tags:
error: Content is protected !!