ಹುಬ್ಬಳ್ಳಿ: ನಿನ್ನೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದು, ಬಜೆಟ್‌ನಲ್ಲಿ ಕೇಂದ್ರ ಸರ್ಕಾರವನ್ನೇ ಬಯ್ಯುವ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಣಿಯಲು ಬಾರದೇ ಇದ್ದರೆ ನೆಲ ಡೊಂಕು ಎನ್ನುವ ಹಾಗೆ ಎಲ್ಲದಕ್ಕೂ ಕೇಂದ್ರದ ಮೇಲೆ ಬೊಟ್ಟು ಮಾಡುತ್ತಿದ್ದಾರೆ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಲ್ಲ. ಪ್ರತಿಯೊಂದಕ್ಕೂ ಕೇಂದ್ರದ ಬಗ್ಗೆ ಮಾತನಾಡುತ್ತಾರೆ. ಕೋವಿಡ್ ನಂತರ ನಾವು ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ. ಸಿಎಂ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಜೆಟ್‌ನಲ್ಲಿ ರೈತಾಪಿ ವರ್ಗಕ್ಕೆ ಭಾರೀ ಅನ್ಯಾಯವಾಗಿದೆ. ಇದು ಒಂದು ಸಮುದಾಯವನ್ನು ಓಲೈಸುವ ಬಜೆಟ್ ಆಗಿದೆ ಎಂದು ಕಿಡಿಕಾರಿದರು.