Mysore
19
clear sky

Social Media

ಭಾನುವಾರ, 16 ಮಾರ್ಚ್ 2025
Light
Dark

ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮೈಸೂರು: ರಾಜ್ಯ ಬಜೆಟ್‌ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಇದರಲ್ಲಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕೆಲಸ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿಂದು ರಾಜ್ಯ ಬಜೆಟ್‌ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ರಾಮಸ್ವಾಮಿ ವೃತ್ತದಿಂದ ಜಿಲ್ಲಾ ಪಂಚಾಯಿತಿ ಕಚೇರಿವರಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ನೂರಾರು ಬಿಜೆಪಿ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಹಲಾಲ್‌ ಬಜೆಟ್‌, ನಿರಾಸದಾಯಕ ಬಜೆಟ್‌. ಈ ಬಜೆಟ್‌ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

Tags: