Mysore
19
clear sky

Social Media

ಭಾನುವಾರ, 16 ಮಾರ್ಚ್ 2025
Light
Dark

ಇದು ಅಲ್ಪಸಂಖ್ಯಾತರ ಓಲೈಕೆ ಬಜೆಟ್:‌ ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್‌ ಆಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಏನೂ ಇಲ್ಲ. ಈ ಬಾರಿಯೂ ಮೈಸೂರಿಗೆ ಏನು ವಿಶೇಷ ಯೋಜನೆ ನೀಡಿಲ್ಲ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಬಜೆಟ್ ಮಂಡಿಸಿದ್ದಾರೆ. ಮುಸ್ಲಿಂಮರಿಗೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಈ ಸರ್ಕಾರದಿಂದ ಏನನ್ನೂ ನಿರೀಕ್ಷೆ ಮಾಡಲು ಸಾದ್ಯವಿಲ್ಲ ಎಂದು ರಾಜ್ಯ ಬಜೆಟ್‌ ವಿರುದ್ಧ ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್ ಇಡಿ ಸಮನ್ಸ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೈಕೋರ್ಟ್‌ನಲ್ಲಿ ಸಮನ್ಸ್ ರದ್ದಾಗಿದೆ. ಇಡಿ ಅಧಿಕಾರಿಗಳು ಮೇಲ್ಮನವಿ ಸಲ್ಲಿಸುತ್ತಾರೆ. ಯಾವುದೇ ಕಾರಣಕ್ಕೂ ಮುಡಾ ಹಗರಣ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಾವು ಸುಪ್ರೀಂಕೋರ್ಟ್‌ಗೆ ಬೇಕಾದ್ರೂ ಹೋಗ್ತೀವಿ. ಮುಡಾ ಹಗರಣ ತಾರ್ಕಿಕ ಅಂತ್ಯ ಕಾಣುವವರೆಗೂ ಬಿಡಲ್ಲ ಎಂದು ಎಚ್ಚರಿಕೆ ನೀಡಿದರು.

 

Tags: