ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಾಮಾಜಿಕ ನ್ಯಾಯವುಳ್ಳ ಬಜೆಟ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ರಾಜ್ಯ ಬಜೆಟ್ ಟೀಕಿಸಿದ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಈ ಬಾರಿಯ ಬಜೆಟ್ ಗಾತ್ರ ಶೇಕಡಾ.10.03ರಷ್ಟು ಹೆಚ್ಚಾಗಿದೆ. ವಿಪಕ್ಷ ನಾಯಕರು ಸ್ಯಾಡಿಸ್ಟ್ ಮೈಂಡ್ ಇಟ್ಟುಕೊಂಡು ಟೀಕೆ ಮಾಡುತ್ತಿದ್ದಾರೆ. ಸಾಲ ಮಾಡಿದ್ದೇ ಸಾಧನೆ ಎಂದು ತಪ್ಪು ತಿಳುವಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಸುಮಾರು 240 ಕೋಟಿ ಕೊಡುತ್ತಿದೆ. ಈ ಬಾರಿ ಮೈಸೂರಿಗೆ ಹಿಂದೆಂದೂ ನೀಡದ ಭರಪೂರ ಯೋಜನೆ ಕೊಟ್ಟಿದ್ದಾರೆ. ಸುಮಾರು 24 ಯೋಜನೆಗಳನ್ನು ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.