Mysore
16
overcast clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಪೊಲೀಸರ ವಿರುದ್ಧ ಮತ್ತೊಂದು ಆರೋಪ ಮಾಡಿದ ಮಾಜಿ ಸಚಿವ ಎಚ್.ಡಿ.ರೇವಣ್ಣ

ಹಾಸನ: ಪೊಲೀಸರು ಕರ್ತವ್ಯದಲ್ಲಿದ್ದಾಗ ಏಳು ಗಂಟೆಗೆ ಎಣ್ಣೆ ಹಾಕುತ್ತಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿಯಾಗಿ ಜೂಜು, ಎಣ್ಣೆ, ಮಟ್ಕಾ, ಗಾಂಜಾ ಗ್ಯಾರಂಟಿ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

ಇದಕ್ಕಾಗಿ ಹಾಸನ ಜಿಲ್ಲೆಯ ಜನ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳಬೇಕು. ಗೌರವಸ್ಥ ಕುಟುಂಬಸ್ಥರು ಬದುಕಲು ಆಗುತ್ತಿಲ್ಲ. ನಾವು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ವ್ಯಂಗ್ಯವಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪೊಲೀಸರು ಕರ್ತವ್ಯದಲ್ಲಿದ್ದಾಗ ಏಳು ಗಂಟೆಗೆ ಎಣ್ಣೆ ಹಾಕುತ್ತಾರೆ. ಎಸ್ಪಿಯವರು ಇದನ್ನು ತಡೆಗಟ್ಟಬೇಕು. ಮಟ್ಕಾ, ಜೂಜು, ಮದ್ಯ ಸೇವನೆಯಿಂದ ಅವರ ಮನೆಯ ಹೆಣ್ಣುಮಕ್ಕಳು ಒಡವೆಗಳನ್ನು ಮಾರಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಎಸ್ಪಿಯವರ ಕೆಳಮಟ್ಟದ ಅಧಿಕಾರಿಗಳು ಅವರ ಕಂಟ್ರೋಲ್‌ನಲ್ಲಿ ಇಲ್ಲ ಎಂದು ಆರೋಪ ಮಾಡಿದರು.

 

 

Tags:
error: Content is protected !!