ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಾ.24 ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಇದರಿಂದ ರನ್ಯಾ ರಾವ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.
ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧ ಮೂರು ದಿನಗಳ ಕಸ್ಟಡಿ ಅಂತ್ಯಗೊಂಡ ಕಾರಣ ರನ್ಯಾ ರಾವ್ ರನ್ನು ಡಿಆರ್‌ಐ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಿದ್ದರು.
ತನಿಖಾ ಪ್ರಗತಿ ವರದಿ ಪರಿಶೀಲಿಸಿದ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.





