Mysore
22
scattered clouds

Social Media

ಬುಧವಾರ, 26 ಆಗಸ್ಟ್ 2026
Light
Dark

ರೆಸಾರ್ಟ್‌ಗಳಲ್ಲಿ ಭದ್ರತೆಗಾಗಿ ಸುತ್ತೋಲೆ ಹೊರಡಿಸಿದ ಸರ್ಕಾರ

ಬೆಂಗಳೂರು: ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್‌, ಹೋಂಸ್ಟೇಗಳಲ್ಲಿ ಭದ್ರತೆ ಮತ್ತು ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಕೊಪ್ಪಳದ ಸಣಾಪುರ ರೆಸಾರ್ಟ್‌ ಮಾಲಕಿ ಹಾಗೂ ಇಸ್ರೇಲ್‌ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಕಾರಣ ರೆಸಾರ್ಟ್‌ ಹೋಮ್‌ಸ್ಟೇಗಳಲ್ಲಿ ಭದ್ರತೆ, ಸುರಕ್ಷತೆ ಕುರಿತು ಕ್ರಮ ತೆಗೆದುಕೊಳ್ಳಬೇಕೆಂದು ಕರ್ನಾಟಕ ಗೃಹ ಇಲಾಖೆ ಆದೇಶ ಹೊರಡಿಸಿದೆ.

ರೆಸಾರ್ಟ್‌ನಲ್ಲಿ ಉಳಿದುಕೊಳ್ಳುವ ಪ್ರವಾಸಿಗರ ಸುರಕ್ಷತೆ ಬಗ್ಗೆ ಮಾಲೀಕರು ಕ್ರಮ ತೆಗೆದುಕೊಳ್ಳಬೇಕು. ಹಾಗೆಯೇ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವಾಗ ಪೊಲೀಸ್‌ ಠಾಣೆಗೆ ಅಥವಾ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಅನುಮತಿ ಪಡೆಯುವುದು ಕಡ್ಡಾಯ ಎಂದು ಖಡಕ್‌ ಸೂಚನೆ ನೀಡಿದೆ.

ಇನ್ನು ಕೊಪ್ಪಳದ ಗ್ಯಾಂಗ್‌ರೇಪ್‌ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯನವರು ಕಂಡಿಸಿದ್ದು, ಸಿಎಂ ಸೂಚನೆ ಮೇರೆಗೆ ಭದ್ರತೆಗಾಗಿ ಸುತ್ತೋಲೆ ಹೊರಡಿಸಲಾಗಿದೆ.

Tags:
error: Content is protected !!