Mysore
36
few clouds

Social Media

ಗುರುವಾರ, 23 ಏಪ್ರಿಲ 2026
Light
Dark

ದರ್ಶನ್‌ ಅನ್‌ಫಾಲೋ ಮಾಡಿದ ಬೆನ್ನಲ್ಲೇ ನಟಿ ಸುಮಲತಾ ಪೋಸ್ಟ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ.

ದರ್ಶನ್‌ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್‌, ಅಭಿಷೇಕ್‌ ಅಂಬರೀಷ್‌, ಅವಿವಾ ಬಿದ್ದಪ್ಪ ಸೇರಿದಂತೆ ಆರು ಮಂದಿ ಆಪ್ತರನ್ನು ಅನ್‌ಫಾಲೋ ಮಾಡಿ ಅಭಿಮಾನಿಗಳಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಅಂಬರೀಷ್‌ ಅವರು ಪೋಸ್ಟ್‌ವೊಂದನ್ನು ಹಾಕಿದ್ದು, ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಬೆಸ್ಟ್‌ ಆಕ್ಟಿಂಗ್‌ ಆಸ್ಕರ್‌ ಅವಾರ್ಡ್‌ ಯಾರಿಗೆ ಹೋಗುತ್ತೆ ಅಂದ್ರೆ.. ಯಾರು ಸತ್ಯವನ್ನು ತಿರುಚುತ್ತಾರೋ, ತಮ್ಮದೇ ತಪ್ಪನ್ನು ಇಟ್ಟುಕೊಂಡು ಬೇರೆಯವರ ಮೇಲೆ ಹಾಕಿ ನೋವು ಮಾಡೋದು, ತಮ್ಮ ಮೇಲಿನ ನಿಂದನೆಯನ್ನು ಬೇರೆಯವರ ಮೇಲೆ ಹಾಕೋದು, ಗೂಬೆ ಕೂರಿಸೋದು ಮಾಡಿ ತಮ್ಮನ್ನು ತಾವು ಹೀರೋ ಎಂಬಂತೆ ಬಿಂಬಿಸಿಕೊಳ್ಳುವುದು ಎಂದು ಸುಮಲತಾ ಪೋಸ್ಟ್‌ ಮಾಡಿದ್ದಾರೆ.

ಈ ಬೆಳವಣಿಗೆಯಿಂದ ದರ್ಶನ್‌ ಅಭಿಮಾನಿಗಳಿಗೆ ಶಾಕ್‌ ಎದುರಾಗಿದ್ದು, ಅಂಬರೀಷ್‌ ಫ್ಯಾಮಿಲಿ ಮೇಲೆ ನಟ ದರ್ಶನ್‌ಗೆ ಬೇಸರವಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.

Tags:
error: Content is protected !!