Mysore
29
scattered clouds

Social Media

ಬುಧವಾರ, 14 ಜನವರಿ 2026
Light
Dark

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್‌ ಆಗಿದ್ದಾರೆ.

ಕೆಲ ದಿನಗಳ ಹಿಂದೆ ಜಗದೀಪ್‌ ಧನಕರ್‌ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು(ಮಾರ್ಚ್‌.12) ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ನಂತರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

ಈ ವೇಳೆ ಜಗದೀಪ್‌ ಅವರಿಗೆ ವೈದ್ಯರು ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದಾರೆ.

ಇನ್ನು ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪ್ರಧಾನಿ ಮೋದಿ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದರು.

Tags:
error: Content is protected !!