Mysore
31
scattered clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

ಓದುಗರ ಪತ್ರ: ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಿ

ಓದುಗರ ಪತ್ರ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಾಲಯ ಹಾಗೂ ಗ್ರಾಮದ ಮುಖ್ಯದ್ವಾರದ ಬಳಿ ಇರುವ ಗಣಪತಿ ದೇವಾಲಯದ ಮುಂಭಾಗ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ದೇವಾಲಯಗಳಿಗೆ ಬರಲು ಮುಜುಗರಪಡುವಂತಾಗಿದೆ.

ಸಂಜೆ 6 ಗಂಟೆಯಾಗುತ್ತಿದ್ದಂತೆಯೇ ಮದ್ಯ ವ್ಯಸನಿಗಳು ಮಹದೇಶ್ವರ ದೇವಸ್ಥಾನದ ಬಳಿ ಅಲ್ಲಲ್ಲಿ ಗುಂಪು ಕಟ್ಟಿಕೊಂಡು ಮದ್ಯದ ಕೂಟಗಳನ್ನು ಮಾಡುತ್ತಾರೆ. ದೇವಸ್ಥಾನದ ಆವರಣದಲ್ಲಿಯೇ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳಿದ್ದು, ಮದ್ಯವ್ಯಸನಿಗಳು ಕುಡಿದು ಎಲ್ಲೆಂದರಲ್ಲಿ ಬಾಟಲಿ ಬೀಸಾಡುತ್ತಾರೆ ಇದು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇನ್ನು ಗ್ರಾಮದ ಪ್ರವೇಶದ್ವಾರದಲ್ಲಿಯೇ ಇರುವ ಗಣಪತಿ ದೇವಾಲಯದ ಮುಂದೆಯೂ ಇದೇ ಸಮಸ್ಯೆ ಎದುರಾಗಿದೆ. ಕೆಲ ಮದ್ಯವ್ಯಸನಿಗಳು ವಾಹನಗಳನ್ನು ನಿಲ್ಲಿಸಿಕೊಂಡು ಮದ್ಯಪಾನ ಮಾಡುತ್ತಾರೆ. ಕುಡಿದ ಮತ್ತಿನಲ್ಲಿ ಪರಸ್ಪರ ಅವಾಚ್ಯ ಪದಗಳಿಂದ ನಿಂದಿಸಿಕೊಳ್ಳುತ್ತಾ ಮಾತನಾಡುತ್ತಿರುತ್ತಾರೆ.

ಇದರಿಂದಾಗಿ ದೇವಸ್ಥಾನಕ್ಕೆ ಬರುವ ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಕಿರಿಕಿರಿಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆಗಮನಹರಿಸಿ, ದೇವಾಲಯಗಳ ಆವರಣದಲ್ಲಿ ಮದ್ಯಪಾನ ಮಾಡುವವರಿಗೆ ಕಡಿವಾಣ ಹಾಕಬೇಕಿದೆ.

-ನಂದೀಶ್ ಗೌಡ, ಅಂತರಸಂತೆ, ಎಚ್.ಡಿ.ಕೋಟೆ ತಾ.

 

Tags:
error: Content is protected !!