ಬೆಂಗಳೂರು: ಎದೆನೋವಿನಿಂದ ಬಳಲುತ್ತಿದ್ದ ಖ್ಯಾತ ಸಂಗೀತ ನಿದೇರ್ಶಕ ಎ.ಆರ್.ರೆಹಮಾನ್ ಅವರ ಆರೋಗ್ಯ ಚೇತರಿಸಿಕೊಂಡ ಹಿನ್ನೆಲೆ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರೆಹಮಾನ್ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಖುದ್ದು ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ರೆಹಮಾನ್ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಚಿಂತೆಪಡುವ ಅವಶ್ಯಕತೆಯಿಲ್ಲ, ಅವರು ಆರಾಮಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ರೆಹಮಾನ್ ಅವರ ಪುತ್ರ ಎ.ಆರ್.ಅಮೀನ್ ತಮ್ಮ ತಂದೆಯ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದ್ದು, ಪ್ರೀತಿಯ ಅಭಿಮಾನಿಗಳೇ ನಿಮ್ಮೆಲ್ಲರ ಬೆಂಬಲಕ್ಕಾಗಿ ಧನ್ಯವಾದಗಳು. ನಿರ್ಜಲೀಕರಣದಿಂದ ತಮ್ಮ ತಂದೆ ಸ್ವಲ್ಪ ನಿಶ್ಯಕ್ತಿ ಹೊಂದಿದ್ದರು. ಆದ್ದರಿಂದ ನಾವು ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಿಸಲಾಯಿತು. ಆ ಪರೀಕ್ಷೆಯ ನಂತರ ಅವರು ಗುಣಮುಖವಾಗಿದ್ದಾರೆ ಎಂದು ಹೇಳಿದ್ದಾರೆ.





