Mysore
22
scattered clouds

Social Media

ಸೋಮವಾರ, 17 ಮಾರ್ಚ್ 2025
Light
Dark

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರ: ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ದೇಶಕ್ಕೆ ಗಂಡಾಂತರವಿಲ್ಲ. ಆದರೆ ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂವಿಧಾನದ ಪ್ರಕಾರ ಧಾರ್ಮಿಕ ಮೀಸಲಾತಿ ಕೊಡಲು ಅವಕಾಶವಿಲ್ಲ. ಕಾಂಗ್ರೆಸ್‌ನವರು ಗುತ್ತಿಗೆಯಲ್ಲೂ ಮೀಸಲಾತಿ ಕೊಟ್ಟಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡೇ ಮಾಡುತ್ತೇವೆ. ಸರ್ಕಾರ ಒಂದು ಸಮುದಾಯವನ್ನು ಓಲೈಸುವ ಕೆಲಸ ಮಾಡುತ್ತಿದೆ. ಇದು ದೇಶಕ್ಕೆ ಗಂಡಾಂತರ ತರುವ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಒಳಮೀಸಲಾತಿಯನ್ನು ಪರಿಶಿಷ್ಟ ವರ್ಗಕ್ಕೆ ಕೊಡಲೇಬೇಕು. ತೆಲಂಗಾಣದಲ್ಲಿ ಈಗಾಗಲೇ ಘೋಷಣೆ ಆಗಿದೆ. ಆದರೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಈ ಬಗ್ಗೆ ಬೇಗ ಸರ್ಕಾರ ತೀರ್ಮಾನ ಕೈಗೊಳ್ಳಲಿ ಎಂದು ಆಗ್ರಹಿಸಿದರು.

Tags: