Mysore
29
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ತಾರತಮ್ಯ ಧೋರಣೆ ತೋರುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಿಲ್ಲ, ಬದಲಿಗೆ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಧೋರಣೆ ತೋರುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವಿಧಾನಸೌಧ ಕಲಾಪದಲ್ಲಿ ಇಂದು(ಮಾರ್ಚ್‌.17) ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಬಾರಿ ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ನೀಡಿರುವುದು ನಮ್ಮ ಪಾಲಿನ ಅನುದಾನವಲ್ಲ. ಕೇಂದ್ರ ಅದರ ಬದಲಿಗೆ ನೀಡಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧ ಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮಾಧ್ಯಮಗಳು, ರಾಜ್ಯದ ಜನತೆ, ವಿದ್ವಾಂಸಉ ಹಾಗೂ ವಿಶ್ವ ವಿದ್ಯಾನಿಲಯಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕನ್ನಡ ಮತ್ತು ಇಂಗ್ಲೀಷ್‌ ದಿನಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದನ್ನು ಸದನದಲ್ಲಿ ಗಮನ ಸೆಳೆದಿದ್ದರರೂ ಕೂಡ ಗ್ಯಾರಂಟಿಗಳ ಬಗ್ಗೆ ಬಜೆಪಿಯವರು ಸುಳ್ಳು ಹೇಳಿದ್ದಾರೆ. 2020 ರಲ್ಲಿಯೂ ನಮ್ಮ ಪಕ್ಷ ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ. ಹೀಗಾಗಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸರ್ಕಾರದ ಅವಧಿ ಮುಗಯುವರೆಗೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಈ ದೇಶದ ಪ್ರಧಾನಿ ಮಂತ್ರಿಯವರು, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ವ್ಯಂಗ್ಯ ಮಾಡಿದ್ದರು. ಆದರೆ ನೀವೇ ಲೋಕಸಭಾ ಚುನಾವಣೆಯ ವೇಳೆ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಾ. ಇನ್ನು ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೇ ಈ ಕೆಲಸ ಮಾಡಿದ್ದೀರಾ.

Tags:
error: Content is protected !!