Mysore
22
moderate rain

Social Media

ಭಾನುವಾರ, 02 ಆಗಸ್ಟ್ 2026
Light
Dark

ಮಾರ್ಚ್‌ 22 ರಂದು ಕರ್ನಾಟಕ ಬಂದ್‌ ನಿಶ್ಚಿತ: ವಾಟಾಳ್‌ ನಾಗರಾಜ್‌

ಬೆಂಗಳೂರು: ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಂಇಎಸ್‌ ಮತ್ತು ಶಿವಸೇನೆ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್‌ 22 ರಂದು ಕರ್ನಾಟಕ ಬಂದ್‌ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ.

ಇಂದು ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ್‌ ಬಂದ್‌ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಸಭೆ ಬಳಿಕ ಮಾತನಾಡಿದ ಅವರು, ನಿಮ್ಮ ಸ್ವಾಭಿಮಾನಕ್ಕಾಗಿ ಯಾರು ವಾಹನ ಹತ್ತಬೇಡಿ. ಮಾರ್ಚ್‌22 ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆ ತನಕ ಕರ್ನಾಟಕ ಬಂದ್‌ ಮಾಡಲಾಗುತ್ತದೆ. ಬೆಳಿಗ್ಗೆ 10:30ಕ್ಕೆ ಟೌನ್‌ ಹಾಲ್‌ನಿಂದ ಫ್ರೀಡಂ ಪಾರ್ಕ್‌ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ ಎಂದರು.

ಬೆಳಗಾವಿ ಘಟನೆ ಕಣ್ಣಿಗೆ ಚಿಕ್ಕದಾಗಿರಬಹುದು. ಆದರೆ, ನಮ್ಮ ಕಣ್ಣಿಗೆ ಇದು ಬೆಟ್ಟ. ಮಾರ್ಚ್‌22ರ ಪ್ರತಿಭಟನೆ ದಿನ ಯಾರು ಮೆಟ್ರೋ ಹತ್ತಬಾರದು. ಅಂದು ಬಸ್‌ ಓಡಿಸಬಾರದೆಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಮಾತನಾಡಿದ್ದೇವೆ. ಇನ್ನೂ ಒಂದು ಸಲ ಹೇಳುತ್ತೇವೆ ಎಂದರು.

ಇನ್ನು ಬಂದ್‌ಗೆ ಸಾರಿಗೆ ನೌಕರರು ಸಹ ಬೆಂಬಲಿಸಿದ್ದಾರೆ. ಈ ಬಗ್ಗೆ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್‌ಗೆ KSRTC, BMTC ನೌಕರರ ಸಂಘದಿಂದ ಕೂಡ ಬೆಂಬಲ ಇದೆ. ಸಾರಿಗೆ ನೌಕರನ ಮೇಲಿನ ಹಲ್ಲೆ ಖಂಡನೀಯ. ಕರ್ನಾಟಕ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.

Tags:
error: Content is protected !!