ಬೆಂಗಳೂರು: ಶಿವಸೇನೆ ಮತ್ತು ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್‌ಗೆ ರಾಜ್ಯ ಸಾರಿಗೆ ಸಂಸ್ಥೆಯ ಬೆಂಬಲವಿಲ್ಲ. ಅಂದು ಬಸ್‌ಗಳು ಸಂಚರಿಸಲಿವೆ ಎಂದು ಕಾರ್ಮಿಕ ಸಂಘದ ಮುಖಂಡ ಅನಂತ ಸುಬ್ಬುರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾತನಾಡಿದ ಅವರು, ಮಾರ್ಚ್.22 ರಂದು ಕರ್ನಾಟಕ ಬಂದ್ ಇರಲಿದೆ. ಆದರೆ ಈ ಬಂದ್‌ಗೆ ಕೆಎಸ್‌ಆರ್‌ಟಿಸಿ ಸಂಸ್ಥೆಯ ಬೆಂಬಲವಿಲ್ಲ. ಹಾಗಾಗಿ ಸರ್ಕಾರಿ ಬಸ್ ಸಂಚಾರ ಇರಲಿದೆ ಎಂದರು.
ರಾಜ್ಯ ಸರ್ಕಾರಿ ನೌಕರರು ಶನಿವಾರ ಕರ್ತವ್ಯಕ್ಕೆ ಹಾಜರಾಗಲಿದ್ದು, ಕೆಎಸ್‌ಆರ್‌ಟಿಸಿ, ಕಲ್ಯಾಣ ಕರ್ನಾಟಕ ಭಾಗದ ಸಾರಿಗೆ, ವಾಯುವ್ಯ ಸಾರಿಗೆ ಹಾಗೂ ಬಿಎಂಟಿಸಿ ಬಸ್‌ಗಳು ಸಂಚಾರ ಮಾಡಲಿವೆ ಎಂದು ಹೇಳಿದರು.





