ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿತ್ಯ ಲೂಟಿಗೆ ನಿಂತು ಜನಸಾಮಾನ್ಯರ ಬದುಕನ್ನು ದುರ್ಬಲಗೊಳಿಸುತ್ತಿದೆ. ಅಲ್ಲದೇ ಒಂದು ಕಡೆ ಉಚಿತ ಎನ್ನುತ್ತಲೇ ಜನಸಾಮಾನ್ಯರ ಕಿಸೆಗೆ ಕಾಂಗ್ರೆಸ್ ಸರ್ಕಾರ ಕನ್ನ ಹಾಕುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಚುನಾವಣೆಗೂ ಮುನ್ನ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಫ್ರೀ ಫ್ರೀ ಎಂದ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಮ್ಮೆ ಪ್ರತಿ ಯೂನಿಟ್‌ಗೆ 36 ಪೈಸೆ ವಿದ್ಯುತ್ ದರ ಏರಿಕೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಇತ್ತೀಚೆಗಷ್ಟೇ ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಆಟೋ ದರ ಏರಿಕೆಗೂ ಸರ್ಕಾರ ಸಮ್ಮತಿ ನೀಡಿತ್ತು. ಬಳಿಕ ವಿದ್ಯುತ್ ಮೀಟರ್ ದರವನ್ನೇ 800% ಏರಿಕೆ ಮಾಡಿ ಜನತೆಗೆ ಶಾಕ್ ನೀಡಿತ್ತು. ಇದೀಗ ಮತ್ತೊಮ್ಮೆ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಲಾಗಿದ್ದು, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ. ಬೆಲೆ ಏರಿಕೆಯೇ ಕಾಂಗ್ರೆಸ್ಸಿನ 6ನೇ ಗ್ಯಾರಂಟಿಯಾಗಿದೆ ಎಂದು ವ್ಯಂಗ್ಯ ಮಾಡಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿತ್ಯ ಲೂಟಿಗೆ ನಿಂತು ಜನಸಾಮಾನ್ಯರ ಬದುಕನ್ನು ದುರ್ಬಲಗೊಳಿಸುತ್ತಿದೆ. ಒಂದು ಕಡೆ ಉಚಿತ ಎನ್ನುತ್ತಲೇ ಜನಸಾಮಾನ್ಯರ ಕಿಸೆಗೆ ಕಾಂಗ್ರೆಸ್ ಸರ್ಕಾರ ಕನ್ನ ಹಾಕುತ್ತಿದೆ.





