ಮೈಸೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ರೈಲು ಸಂಖ್ಯೆ ೦೬೫೬೭ ಮೈಸೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಮಾ.೨೮ರಂದು ಸಂಜೆ ೭.೧೦ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಮಧ್ಯಾಹ್ನ ೨.೦೫ಕ್ಕೆ ವಿಜಯಪುರ ತಲುಪಲಿದೆ.
ರೈಲು ಸಂಖ್ಯೆ ೦೬೫೬೮ ವಿಜಯಪುರ – ಮೈಸೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಮಾ.೩೧ರಂದು ಸಂಜೆ ೭ಗಂಟೆಗೆ ವಿಜಯಪುರದಿಂದ ಹೊರಟು, ಮರುದಿನ ಮಧ್ಯಾಹ್ನ ೨.೨೦ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.
ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಈ ರೈಲು ೩ ಎಸಿ ಟು ಟೈರ್, ೬ ಎಸಿ ತ್ರಿ ಟೈರ್, ೧೦ ಸ್ಲೀಪರ್ ಕ್ಲಾಸ್, ೨ ಜನರಲ್ ಸೆಕೆಂಡ್ ಕ್ಲಾಸ್ ಮತ್ತು ೨ ಎಸ್‌ಎಲಆರ್/ ಡಿ ಬೋಗಿಗಳನ್ನು ಒಳಗೊಂಡಿರುತ್ತದೆ.
ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ನೈಋತ್ಯ ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





