Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಉದಯಗಿರಿ ಪ್ರಕರಣ: ಮೌಲ್ವಿಯ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್‌

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಮೌಲ್ವಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟಕ್ಕೆ ಕಾರಣರಾಗಿದ್ದ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಘಟನೆ ನಡೆದ 11 ದಿನಗಳ ಬಳಿಕ ಪೊಲೀಸರು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು. ಕೋರ್ಟ್‌ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಬಳಿಕ ಆರೋಪಿ ಮೌಲ್ವಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದೆ.

Tags:
error: Content is protected !!