ನವದೆಹಲಿ: ರಾಜ್ಯದಾದ್ಯಾಂತ ಸುದ್ದಿಯಲ್ಲಿರುವ ಹನಿಟ್ರ್ಯಾಪ್ ಪ್ರಕರಣವು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಕರ್ನಾಟಕದಲ್ಲಿ ಸಚಿವರು, ಶಾಸಕರ ವಿರುದ್ಧ ಹನಿಟ್ರ್ಯಾಪ್ ನಡೆದಿದೆ ಎನ್ನಲಾದ ಪ್ರಕರಣ ಕುರಿತು ತನಿಖೆ ನಡೆಸುವಂತೆ ವಿನಯ್‌ಕುಮಾರ್ ಸಿಂಗ್ ಎಂಬುವವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ (ಪಿಐಎಲ್) ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ವಿಧಾನಸಭೆ ಅಧಿವೇಶನದ ವೇಳೆ ಸ್ವತಃ ಸಚಿವರೇ ತಮ್ಮ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ಹೇಳಿದ್ದಾರೆ. ಸಾರ್ವಜನಿಕ ವಿಶ್ವಾಸದ ದೃಷ್ಠಿಯಿಂದ ಕೋರ್ಟ್ ನಿಗಾದಲ್ಲಿ ಕೂಡಲೇ ತನಿಖೆ ನಡೆಸಬೇಕು ಎಂದು ವಿನಯ್‌ಕುಮಾರ್ ಸಿಂಗ್ ಮುಖ್ಯ ನಾಯಾಮೂರ್ತಿ ಬಳಿ ಮನವಿ ಮಾಡಿದ್ದಾರೆ.
ಇದಕ್ಕೆ ಶೀಘ್ರವೇ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದ್ದು, ಹನಿಟ್ರ್ಯಾಪ್ ವಿಚಾರಣೆಯನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.





