Mysore
34
scattered clouds

Social Media

ಗುರುವಾರ, 23 ಏಪ್ರಿಲ 2026
Light
Dark

ಚಾಮರಾಜನಗರ: ಭರ್ಜರಿ ಬೇಟೆ, ಸಾವಿರಾರು ಕೆ.ಜಿ. ಅಕ್ಕಿ ವಶ

ಚಾಮಾಜನಗರ: ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡುತ್ತಿದ್ದ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸಾವಿರಾರು ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಇಂದು(ಮಾರ್ಚ್‌.25) ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 2 ಟನ್‌ಗೂ ಅಧಿಕ ಅಕ್ಕಿ ವಶಕ್ಕೆ ಪಡೆದ ಘಟನೆ ನಗರದ ಕೆಎಸ್ಆರ್‌ಟಿಸಿ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ.

ಈ ಕುರಿತು ಗ್ರಾಮಾಂತರ ಪ್ರದೇಶದಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಆಧಾರದ ಮೇಲೆ ಅಕ್ಕಿ ಖರೀದಿಸಿ ದಾಸ್ತಾನಿಟ್ಟಿದ್ದ ಗೋದಾಮಿನ ಮೇಲೆ ಪರಿಶೀಲನೆ ನಡೆಸಿದ್ದು, ಸುಮಾರು 2,200 ಕೆ.ಜಿ.ಗೂ ಅಧಿಕ ಅನ್ನಭಾಗ್ಯ ಅಕ್ಕಿ ವಶ ಪಡಿಸಿಕೊಂಡಿದ್ದಾರೆ.

ಇನ್ನು ಈ ಪ್ರಕರಣ ಗ್ರಾಮಾಂತರ ಪ್ರದೇಶದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಆರೋಪಿಗಳಿಂದ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!