Mysore
30
scattered clouds

Social Media

ಭಾನುವಾರ, 01 ಮಾರ್ಚ್ 2026
Light
Dark

ಕೊಳ್ಳೇಗಾಲ: ಭೀಕರ ಅಪಘಾತ, ಇಬ್ಬರು ಸಾವು, 15 ಮಂದಿಗೆ ಗಂಭೀರ ಗಾಯ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಬೈಕ್‌, ಟಾಟಾ ಏಸ್‌ ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರ ಗಾಯವಾಗಿದೆ.

ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಇಂದು(ಮಾರ್ಚ್.‌25) ಬೈಕ್, ಟಾಟಾ ಏಸ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ.

ಈ ದುರಂತದಲ್ಲಿ ಮೃತ ದುರ್ದೈವಿಗಳನ್ನು ಕೊಳ್ಳೇಗಾಲ ತಾಲೂಕಿನ ಬಾಣೂರು ಗ್ರಾಮದ ರಾಜಮ್ಮ (53) ಮತ್ತು ಶೃತಿ( 30) ಎಂದು ಗುರುತಿಸಲಾಗಿದೆ. ಅಲ್ಲದೇ ಅಪಘಾತದಲ್ಲಿ ಬೈಕ್ ಸವಾರ ಪ್ರಕಾಶ್, ಬಸ್ ಚಾಲಕ ರಾಜಶೇಖ‌ರ್ ಹಾಗೂ ಟಾಟಾ ಏಸ್‌ನಲ್ಲಿದ್ದ ಬಾಣೂರು ಗ್ರಾಮದ 13 ಮಂದಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಚಿಕಿತ್ಸೆಗಾಗಿ ಸಿಮ್ಸ್ ಮತ್ತು ಮೈಸೂರಿಗೆ ರವಾನೆ ಮಾಡಲಾಗಿದೆ. ಇನ್ನು ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!